ಶಾಂತಿ
ಶಾಂತಿ
ಬರಗೂರು ರಾಮಚಂದ್ರಪ್ಪ
ಬರಗೂರು ರಾಮಚಂದ್ರಪ್ಪ : ಕನ್ನಡ ಸಾಹಿತಿಯಾಗಿ, ಚಿಂತಕರಾಗಿ ಜನಪ್ರಿಯ. ಕಾದಂಬರಿಕಾರರಾಗಿ, ಕತೆ, ಕವನ, ನಾಟಕಗಳನ್ನು ರಚಿಸಿದ್ದಾರೆ, ಬಂಡಾಯ ಸಾಹಿತ್ಯ ಸಂಘಟನೆಯ ಅಧ್ಯಕ್ಷರಾಗಿ ಕನ್ನಡ ಸಾಹಿತ್ಯ ಲೋಕವನ್ನು ಕಟ್ಟಿದ್ದಾರೆ. ೨೩ ಚಲನಚಿತ್ರಗಳನ್ನು ನಿರ್ದೇಶಿಸಿದ್ದಾರೆ. “ತಾಯಿ” ಚಿತ್ರಕ್ಕೆ ರಾಷ್ಟ್ರಪ್ರಶಸಿಯೂ ದೊರಕಿದೆ. ಅತ್ಯುತ್ತಮ ಗೀತ ರಚನೆಗಾಗಿ ರಾಷ್ಟ್ರೀಯ ಅತ್ಯುತ್ತಮ ಗೀತರಚನಕಾರ ಪ್ರಶಸ್ತಿಯನ್ನೂ ಪಡೆದಿದ್ದಾರೆ ಪಂಪ ಪ್ರಶಸ್ತಿಯನ್ನು ಪಡೆದಿದ್ದಾರೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದವರು. ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.